ಸುಳ್ಯ ತಾಲೂಕಿನಲ್ಲಿ ಒಂದು ವರ್ಷದಲ್ಲಿ ಅಪಘಾತದಲ್ಲಿ 35 ಸಾವು….!

January 14, 2020
7:37 AM

ಸುಳ್ಯ: ಸುಳ್ಯ ಪೊಲೀಸ್ ಠಾಣೆಯ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಯಿತು. ರಸ್ತೆ ಸುರಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಸ್.ಅಂಗಾರ ರಸ್ತೆಯಲ್ಲಿ ಪ್ರಯಾಣಿಸುವಾಗ ಜನರು ಅತ್ಯಂತ ಜಾಗೃತರಾಗಿದ್ದು ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಅಪಘಾತಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸ್ತೆಯಲ್ಲಿನ ಅಪಾಯಕಾರಿ ತಿರುವು, ದಿಬ್ಬಗಳನ್ನು ಸರಿಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು. ಸುಳ್ಯಕ್ಕೆ ಮಂಜೂರಾದ ಹೈವೇ ಪಟ್ರೋಲ್ ವಾಹನವನ್ನು ಶಾಸಕ ಅಂಗಾರ ಈ ಸಂದರ್ಭದಲ್ಲಿ ಉದ್ಘಾಟಿಸಿದರು.

ಒಂದು ವರ್ಷದಲ್ಲಿ ಅಪಘಾತದಲ್ಲಿ 35 ಸಾವು:

ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕಾಗಿದೆ. ಮಾನವ ಜೀವಗಳು ರಸ್ತೆಯಲ್ಲಿ ಬಲಿಯಾಗುವುದನ್ನು ತಪ್ಪಿಸಲು ಎಲ್ಲರೂ ಕೈಜೋಡಸಬೇಕು ಎಂದರು. ಸುಳ್ಯ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 100 ಅಪಘಾತ ಪ್ರಕರಣಗಳು ದಾಖಲಾಗಿದ್ದು 35 ಮಂದಿ ಮೃತಪಟ್ಟಿದ್ದಾರೆ ಮತ್ತು 96 ಮಂದಿ ಗಾಯಗೊಂಡಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಾಗಿದೆ ಎಂದರು.

ಸುಳ್ಯ ಎಸ್‍ಐ ಎಂ.ಆರ್.ಹರೀಶ್, ಕ್ರೈಂ ಎಸ್‍ಐ ರತ್ನಕುಮಾರ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಜಾಗೃತಿ ಜಾಥಾದಲ್ಲಿ ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕರಾದ ನಟರಾಜ್, ಭವಾನಿ, ಜಯಲತ, ರಮ್ಯ, ವಿನೋದ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror