ಸುಳ್ಯ ತಾಲೂಕು ಗ್ರಾಮ ಪಂಚಾಯತ್ ನೌಕರರ ಸಭೆ

October 16, 2019
5:41 PM

ಸುಳ್ಯ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ಸುಳ್ಯ ತಾಲೂಕು ಇದರ ಸಭೆಯು ಅಧ್ಯಕ್ಷ  ಚಿದಾನಂದ ಜಾಲ್ಸೂರು ಇವರ ಅಧ್ಯಕ್ಷತೆಯಲ್ಲಿ  ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ದೇವಿಪ್ರಸಾದ್ ಬೊಳ್ಮ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ, ತಾಲೂಕು ಉಪಾಧ್ಯಕ್ಷರಾದ ನಾಗವೇಣಿ ಮಡಪ್ಪಾಡಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ, ಜೊತೆ ಕಾರ್ಯದರ್ಶಿ ನೇತ್ರಾವತಿ ಆಲೆಟ್ಟಿ, ಮೈಸೂರು ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ಸುಳ್ಯ ತಾಲೂಕು ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರಿಗೆ ಸರಕಾರದಿಂದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ, ಸೇವಾ ಭದ್ರತೆ ಮತ್ತು ಇತರ ಇಲಾಖೆಗಳ ಕೆಲಸಗಳನ್ನು ಗ್ರಾಮ ಪಂಚಾಯತ್ ಗೆ ವಹಿಸಿ ಪಂಚಾಯತ್ ನೌಕರರಿಗೆ ತೀವ್ರ ಒತ್ತಡ ನೀಡುವುದರ ಕುರಿತು ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವುದೆಂದು ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ಮತ್ತು ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್ ಪಡೆದಿರುವ ರಾಜ್ಯಾಧ್ಯಕ್ಷರಾದ  ದೇವಿಪ್ರಸಾದ್ ಬೊಳ್ಮ ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಸುಳ್ಯ ತಾಲೂಕು ಸಂಘದ ಸದಸ್ಯರಾದ ಗಿರಿಧರ ಕಳಂಜ ಸ್ವಾಗತಿಸಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ ವಂದಿಸಿ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror