ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ 48 ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾ ಸಾಂಸ್ಕೃತಿಕ ಉತ್ಸವ ಶನಿವಾರ ಆರಂಭಗೊಂಡಿತು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅಧ್ಯಕ್ಷತೆ ವಹಿಸಿದ್ದರು. ಸುಳ್ಯದ ಹಿರಿಯ ಉದ್ಯಮಿ ಕೃಷ್ಣ ಕಾಮತ್, ಸುಳ್ಯದ ಪೊಲೀಸ್ ಉಪನಿರೀಕ್ಷಕ ಎಂ.ಆರ್.ಹರೀಶ್, ಗಾನ ನೃತ್ಯ ಅಕಾಡೆಮಿಯ ಅಧ್ಯಕ್ಷ ರಾಧಾಕೃಷ್ಣ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕ ಅಕ್ಷಯ್ ಕೆ.ಸಿ, ದಸರಾ ಉತ್ಸವ ಸಮಿತಿಯ ಪ್ರಧಾನ ಸಂಯೋಜಕ ನ.ಸೀತಾರಾಮ ಮಾತನಾಡಿದರು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಉಪಾಧ್ಯಕ್ಷ ರವಿಚಂದ್ರ ಕೊಡಿಯಾಲಬೈಲು, ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ರಾಜು ಪಂಡಿತ್, ಶಾರದಾಂಬಾ ಸೇವಾ ಟ್ರಸ್ಟ್ ನ ಅಧ್ಯಕ್ಷ ನವೀನ್ ಚಂದ್ರ ಬೆಂಗಳೂರು, ಪ್ರಧಾನ ಕಾರ್ಯದರ್ಶಿ ಎಂ.ಕೆ.ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ ದಾಸ್ ಸ್ವಾಗತಿಸಿ, ಪ್ರಸ್ತಾವನೆಗೈದರು.ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ ವಂದಿಸಿದರು. ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು.