ಸುಳ್ಯ: ಅಂಗಾರರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಹಕಾರ ಚಳವಳಿ ಘೋಷಣೆ ಮಾಡಿದ್ದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರು. ಆದರೆ ಅಸಹಾಕಾರ ಚಳವಳಿ ಕಾಂಗ್ರೆಸ್ ಸೃಷ್ಠಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಸೇರಿದ್ದು ಯಾವಾಗ ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡದಾರಿಯಲ್ಲಿ ಅಧಿಕಾರ ಹಿಡಿದ ಕಾರಣ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಪ್ರಾಮಾಣಿಕರನ್ನೂ, ಆರು ಬಾರಿ ಶಾಸಕರಾದವರನ್ನೂ ಮಂತ್ರಿಸ್ಥಾನ ನೀಡದೆ ಕಡೆಗಣಿಸಿದ್ದಾರೆ. ಮತದಾರ ಕೊಟ್ಟ ಜನಾದೇಶಕ್ಕೆ ಬಿಜೆಪಿ ಅಪಚಾರ ಮಾಡಿದೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ಸುಧೀರ್ ರೈ ಮೇನಾಲ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel