ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ನೂತನ ವೃತ್ತ ನಿರೀಕ್ಷಕರಾಗಿ ರಾಜ್ಯ ಗುಪ್ತ ವಾರ್ತೆಯ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಆಗಮಿಸಲಿದ್ದಾರೆ. ನವೀನ್ ಚಂದ್ರ ಜೋಗಿ ಅವರು ಈ ಹಿಂದೆ ಲೋಕಾಯುಕ್ತ, ರಾಜ್ಯ ರೌಡಿ ನಿಗ್ರಹ ದಳ ಮತ್ತಿತರ ವಿಭಾಗದಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.
ಆರ್.ಸತೀಶ್ ಕುಮಾರ್ ಎರಡೂವರೆ ವರ್ಷಕ್ಕಿಂತಲೂ ಹೆಚ್ಚು ಸಮಯ ಸುಳ್ಯ ವೃತ್ತ ನಿರೀಕ್ಷಕರಾಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಯಶಸ್ವಿಯಾಗಿ ನೀಭಾಯಿಸಿದ್ದರು. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳನ್ನೊಳಗೊಂಡ ಸುಳ್ಯ ವೃತ್ತದ ನಿರೀಕ್ಷಕರಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಒತ್ತು ನೀಡಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel