ಸುಳ್ಯ ಶಾಸಕರಿಗೆ ಸಚಿವ ಸ್ಥಾನ- ಆದಿ ದ್ರಾವಿಡ ಸಮಾಜ ಸೇವಾ ಸಂಘ ಆಗ್ರಹ

August 27, 2019
10:02 PM

ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ‌.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ‌‌ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ‌ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ‌ ಇತರ ಶಾಸಕರು, ಮುಖಂಡರು ಕೂಡಾ‌ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror