ಸುಳ್ಯ: ಜೀವನದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಕಾಲಕ್ಕೆ ತಕ್ಕಂತೆ ಬರುವ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆದಾಗ ಜೀವನದಲ್ಲಿ ಯಶಸ್ವಿ ವ್ಯಕ್ತಿಗಳಾಗಲು ಸಾಧ್ಯ ಎಂದು ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಹೇಳಿದರು.
ಅವರು ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾ ದಿನಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶಾಸಕ ಎಸ್ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲ ಡಾ ಅಚ್ಯುತ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಕಾರ್ಯದರ್ಶಿಗಳಾದ ರಕ್ಷಿತ್ ಕೆ, ಹರ್ಷಿತ್, ಐಶ್ವರ್ಯ ರೈ, ಜಶ್ಮಿ.ಪಿ.ಯು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತೀಶ್‍ಕುಮಾರ್ ಕೆ. ಆರ್ ಸ್ವಾಗತಿಸಿ, ಸಾಂಸ್ಕೃತಿಕ ಸಂಘದ ಸಂಚಾಲಕಿ ಲತಾ ವಂದಿಸಿದರು. ಧನರಾಜ್ ಹಾಗೂ ಸುರೇಖಾ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel