ಸುಳ್ಯ: ಸುಳ್ಯದ ಗ್ರಾಮೀಣ ರಸ್ತೆ ದುರಸ್ತಿ ಮಾಡಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಳ್ಯದ ಬಿಜೆಪಿ ನಿಯೋಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿತು. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ ಸಂಪೂರ್ಣ ಹದಗೆಟ್ಟಿರುವ ಸುಳ್ಯದ ಗ್ರಾಮೀಣ ರಸ್ತೆಗಳನ್ನು ದುರಸ್ಥಿ ಪಡಿಸಲು ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.
ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮುಖಂಡರಾದ ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಎನ್.ಎ.ರಾಮಚಂದ್ರ, ಸುಧಾಕರ ಕಾಮತ್, ವಿನಯಕುಮಾರ್ ಕಂದಡ್ಕ, ದಿನೇಶ್ ಮೆದು, ರಾಕೇಶ್ ರೈ ಕೆಡೆಂಜಿ ಮತ್ತಿತರರು ನಿಯೋಗದಲ್ಲಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel