ಸುಳ್ಯದಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

August 15, 2019
10:20 AM

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರ‌ಮದಲ್ಲಿ ತಹಶೀಲ್ದಾರ್ ಎನ್‌.ಎ‌.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಸ್ವಾತಂತ್ರ್ಯ ಸಂದೇಶ ನೀಡಿದ ಅವರು ಭವ್ಯ ಭಾರತದ ಪರಿಕಲ್ಪನೆಯ ಯೋಜನೆಗಳಡಿಯಲ್ಲಿ ಯುವ ಸಮುದಾಯವು ತೊಡಗಿಸಿಕೊಂಡು ದೇಶದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾಗಿದೆ ಎಂದು ಕರೆ ನೀಡಿದರು. ಪ್ರಾಚೀನ ಕಾಲದ ಗತ ವೈಭವವನ್ನು ನಮ್ಮ ದೇಶವು ಮತ್ತೆ ಪಡೆಯುವಂತಾಗಬೇಕು. ಅತಿಯಾದ ಆಧುನಿಕ ತಂತ್ರಜ್ಞಾನದ ಆವಿಷ್ಕಾರದ ಭರದಲ್ಲಿ ಜಗತ್ತೇ ಮೆಚ್ಚುವ ನಮ್ಮ ಆಚಾರ-ವಿಚಾರ, ಸಂಸ್ಕೃತಿ, ನಡೆ ನುಡಿ ಒಗ್ಗಟ್ಟು ರಾಷ್ಟ್ರೀಯ ಭಾವೈಕ್ಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಆಚರಣೆಗಳು ನಮ್ಮ ಭಾವೈಕ್ಯತೆಯನ್ನು ಬೆಸೆಯಲಿ, ನಮ್ಮ ಮನಸ್ಸನ್ನು ಪತಿವರ್ತಿಸಲಿ ನವ್ಯ ಸಾಧನೆಗೆ ಸ್ಪೂರ್ತಿಯ ಚಿಲುಮೆಯಾಗಲಿ ಆ ಮೂಲಕ ಭವ್ಯ ಭಾರತ ನಿರ್ಮಾಣವಾಗಲಿ ಎಂದು ಆಶಯವನ್ನು ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group