ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಸದಸ್ಯೆ ಪುಷ್ಪಾ ಮೇದಪ್ಪ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾನುಮತಿ, ಡಾ.ಸಾಯಿಗೀತಾ ಜ್ಞಾನೇಶ್ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಸ್ವಾಗತಿಸಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಆರೋಗ್ಯಮಿತ್ರ ಮುರಳಿ ನಳಿಯಾರು ವಂದಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel