ಸುಳ್ಯ: ಭಾಷೆ ಉಳಿದರೆ ಮಾತ್ರ ಸಂಸ್ಕೃತಿ, ಜನಾಂಗ ಉಳಿಯುತ್ತದೆ. ಆದುದರಿಂದ ಭಾಷೆಯ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಭಾಷೆಯನ್ನು ಹೃದಯದಲ್ಲಿರಿಸಿ ಭಾವನಾತ್ಮಕವಾಗಿ ಬೆಳೆಸಬೇಕು ಮತ್ತು ಭಾಷೆಯ ಜೊತೆ ನಾವೂ ಬೆಳೆಯಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ನಗರ ಪಂಚಾಯಿತಿ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಡೇವಿಡ್ ಧೀರಾ ಕ್ರಾಸ್ತಾ, ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್‍ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ, ಗೃಹರಕ್ಷಕ ದಳದ ಕಮಾಂಡೆಂಟ್, ಜಯಂತ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ, ನಗರ ಪಂಚಾಯಿತಿ ಮುಖ್ಯಾಧಿಕಾರಿ ಮತ್ತಡಿ ಮತ್ತಿತರರು ಉಪಸ್ಥಿತರಿದ್ದರು.
ನಗರದಲ್ಲಿ ಸಂಚಾರಿ ನಿಯಂತ್ರಣದಲ್ಲಿ ಕಾರ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕ ದಳದ ಪುಷ್ಪಾವತಿ, ರಂಗ ನಿರ್ದೇಶಕ ಜೀವನ್ ರಾಂ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುಸ್ಕರಿಸಲಾಯಿತು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.