ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ವೈಭವದ ಸೀತಾರಾಮ ಕಲ್ಯಾಣೋತ್ಸವ ನಡೆಯಿತು.
ಸರ್ವೇ ಜನ ಸುಖಿನೋ ಭವಂತು ಎಂಬ ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಬಲು ಅಪರೂಪದ ಮತ್ತು ಆನಂದದಾಯಕವಾದ ಸೀತಾರಾಮ ಕಲ್ಯಾಣೋತ್ಸವ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಆರಂಭದಲ್ಲಿ ದೀಪಾಂಜಲಿ ಮಹಿಳಾ ಭಜನಾ ಮಂಡಳಿ, ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆ ನಡೆಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel