ಸೆ.30 : ಕೋಟೇಶ್ವರದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಡಲಿದೆ ಬ್ರಹ್ಮರಥ

September 29, 2019
9:00 PM

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ.

Advertisement

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ,  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥದ ಕಾರ್ಯ ಪರಿಪೂರ್ಣಗೊಂಡಿದ್ದು ಕೋಟೇಶ್ವರದಿಂದ ರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ ಎಂದು ತಿಳಿಸಿದರು. 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನು ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ ಕೈಚಳಕದಲ್ಲಿ ವೈಶಿಷ್ಟ್ಯಪೂರ್ಣವಾಗಿ ಮೂಡಿಬಂದಿದೆ ಎಂದು ವಿವರಿಸಿದರು.

ನೂತನ ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ ಅ.2ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ್ದು ಅಲ್ಲಿ ದೇವಳದ ಆಡಳಿತವು ಭವ್ಯ ಮೆರವಣಿಗೆಯಲ್ಲಿ ರಥವನ್ನು ಬರಮಾಡಿಕೊಂಡು ದೇವಳಕ್ಕೆ ಸಮರ್ಪಣೆಗೊಳ್ಳಲಿದೆ ಎಂದು ಸತೀಶ್ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್ , ಗೌರವ ಸಲಹೆಗಾರ ಸುಧಾಕರ ರಾವ್‌ , ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್ ಉಡುಪಿ , ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಕುಂದಾಪುರ, ಮುಂತಾದವರು  ಇದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group