ಸೆ.30 ರಂದು ಸಮಾಜ ಘಾತಕ ಶಕ್ತಿಗಳ ವಿರುದ್ಧ ಕೊಯನಾಡಿನಲ್ಲಿ ಜನಜಾಗೃತಿ ಸಭೆ ಮತ್ತು ಜಾಗೃತಿ ಜಾಥಾ

September 28, 2019
3:15 PM

ಸುಳ್ಯ: ಜನಜಾಗೃತಿ ಸಮಿತಿ ಸಂಪಾಜೆ ವಲಯದ ವತಿಯಿಂದ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಜನಜಾಗೃತಿ ಸಭೆ ಸೆ.30ರಂದು ಸಂಜೆ.4 ಗಂಟೆಗೆ ಕೊಯನಾಡು ಶ್ರೀ ಗಣೇಶ ಕಲಾಮಂದಿರದ ವಠಾರದಲ್ಲಿ ನಡೆಯಲಿದೆ ಎಂದು ಬಿಜೆಪಿ ಸುಳ್ಯ ನಗರ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಅಪರಾಹ್ನ 2ರಿಂದ ಸಂಪಾಜೆ ಗೇಟಿನಿಂದ ಕೊಯನಾಡು ಗಣೇಶ ಕಲಾಮಂದಿರದವರೆಗೆ ಜಾಗೃತಿ ಜಾಥಾ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿ ಪ್ರಮುಖರು ಸಭೆಯಲ್ಲಿ ಭಾಷಣ ಮಾಡಲಿದ್ದಾರೆ‌. ಸುಳ್ಯ ಬಿಜೆಪಿ ಮಂಡಲ ಸಮಿತಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಜಾಗೃತಿ ಅಭಿಯಾನಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ. ಕೊಡಗು ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ಹತ್ಯೆಯನ್ನು ಖಂಡಿಸಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ.

Advertisement

ಎರಡು ಬಾರಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾಗಿ, ಗ್ರಾಮಕ್ಕೆ ರಾಷ್ಟ್ರಪ್ರಶಸ್ತಿ ಬರುವಂತೆ ಮಾಡಿ ಗ್ರಾಮವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದವರು ಬಾಲಚಂದ್ರ ಕಳಗಿಯವರು. ಆದರೆ ಕ್ರಿಮಿನಲ್ ಮಾನಸಿಕತೆಯ ವ್ಯಕ್ತಿಗಳು ಕಾರಿಗೆ ಲಾರಿ ಡಿಕ್ಕಿ ಹೊಡೆಸಿ ಅವರನ್ನು ಕೊಲೆ ಮಾಡಿದ್ದಾರೆ. ಗ್ರಾಮಕ್ಕೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮವನ್ನು ಅಭಿವೃದ್ಧಿಪಡಿಸಿರುವುದರ ಜೊತೆಗೆ ಗ್ರಾಮವನ್ನು ಮದ್ಯಮುಕ್ತವಾಗಿಸಿ ಯಾವುದೇ ಕ್ರಿಮಿನಲ್ ಚಟುವಟಿಕೆಗಳು ನಡೆಯದಂತೆ ನೋಡಿಕೊಂಡರು. ಆದರೆ ಕ್ರಿಮಿನಲ್ ಗ್ಯಾಂಗ್ ನ ಪಿತೂರಿಗೆ ಅವರು ಬಲಿಯಾಗಿದ್ದಾರೆ. ಇದು ಇಡೀ ಗ್ರಾಮಕ್ಕೆ ದೊಡ್ಡ ನೋವು ತಂದಿದೆ. ಇಂತಹಾ ಕ್ರಿಮಿನಲ್ ಗ್ಯಾಂಗ್ ಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು ಮತ್ತು ಇಂತಹಾ ಸಮಾಜ ಘಾತುಕ ಶಕ್ತಿಗಳು ತಲೆ ಎತ್ತದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜನಜಾಗೃತಿ ಸಭೆ ಮತ್ತು ಜಾಥಾ ಏರ್ಪಡಿಸಲಾಗಿದೆ.

ಈ ಮಾಫಿಯಾಗಳ ಅಕ್ರಮ ಚಟುವಟಿಕೆಗಳ ತನಿಖೆಯಾಗಬೇಕು ಮತ್ತು ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗುವುದು. ಸುಳ್ಯ ಮತ್ತು ಕೊಡಗಿನ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜಾರಾಮ ಕಳಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದ.ಕ‌.ಜಿಲ್ಲಾ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ಭಜರಂಗದಳ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ಸಂತೋಷ್ ಮಡ್ತಿಲ, ಬಾಲಕೃಷ್ಣ ನೆಡ್ಚಿಲು, ಶಬರೀಶ ಕುದ್ಕುಳಿ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ
July 7, 2025
11:01 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ
July 7, 2025
10:58 AM
by: The Rural Mirror ಸುದ್ದಿಜಾಲ
ಶುಕ್ರವಾರ ಈ ಪರಿಹಾರ ಮಾಡಿ ಸಾಕು, ಹಣದ ಸಮಸ್ಯೆ ಮಾಯವಾಗುತ್ತೆ
July 7, 2025
10:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?
July 6, 2025
5:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group