ಸ್ವಾತಂತ್ರೋತ್ಸವದಂದು ಗಮನಸೆಳೆದ “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ”

August 16, 2019
7:27 PM

ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ  ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ  ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ  ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.

ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror