ಹೈದರಬಾದ್: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧಿಸಿದಂತೆ ನಾಲ್ವರು ಅರೋಪಿಗಳನ್ನು ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆಗೈಯಲಾಗಿದೆ.
ಬೆಳಗಿನ ಜಾವ 3:30 ರ ವೇಳೆ ಅತ್ಯಾಚಾರ, ಕೊಲೆ ನಡೆದ ಸ್ಥಳ ಪರಿಶೀಲನೆಗೆ ತೆರಳಿದ ವೇಳೆ ನಾಲ್ವರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿಗಳಾದ ಆರೀಫ್, ಶಿವ, ಚೆನ್ನ ಕೇಶವುಲು, ನವೀನ್ ನನ್ನು ಎನ್ ಕೌಂಟರ್ ಮಾಡಲಾಗಿದೆ. ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡದಿಂದ ಎನ್ ಕೌಂಟರ್ ನಡೆಸಲಾಗಿದೆ.
ಕೆಲ ದಿನಗಳ ಹಿಂದೆ ಪಶುವೈದ್ಯೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ನಂತರ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿತ್ತು. ಕೆಲವೇ ಗಂಟೆಗಳಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel